Skip to main content

ತಂದೆ ಯಾಕೆ ಹೀಗೆ

ತಂದೆ ಯಾಕೆ ಹೀಗೆ

---------------------------
ಮಗ ಶಾಲೆಗೆ ಹೋಗುತಿದ್ದ. ಅಧ್ಯಾಪಕರು ಕೊಟ್ಟ ಹೋಂ ವರ್ಕ್ ಮಾಡಿದ್ದೀಯಾ ಎಂದು ತಂದೆ ಕೇಳಿದರು, ಆಯ್ತು ಎಂದು ಮಗನು ಉತ್ತರಿಸಿದ. ಎಲ್ಲಾ ಕಾರ್ಯದಲ್ಲೂ ತಂದೆ ಮಗನನ್ನು ಪ್ರಶ್ನಿಸುತ್ತಿದ್ದರು.
ಗೇಟ್ ತೆರೆದು ಬಿಟ್ಟು ಹೋದರೆ ಗೇಟ್ ಹಾಕಿ ಹೋಗೆಂದೂ, ಪೈಪಲ್ಲಿ ನೀರಿನ ಹನಿಗಳು ಬೀಳುತ್ತಿದ್ಧರೆ ಪೈಪ್ ಸರಿಯಾಗಿ ಬಂದ್ ಮಾಡೆಂದೂ, ಫ್ಯಾನ್ ಸ್ವಿಚ್ ಆನ್ ಮಾಡಿ ಆಫ್ ಮಾಡದೆ  ಹೋದರೆ ಸುಮ್ಮನೆ ಯಾಕೆ ಫ್ಯಾನ್ ತಿರುಗಿಸುತ್ತೀಯಾ ಎಂದೂ, ನೆನೆದ ಬಟ್ಟೆಯನ್ನು ಬೆಡ್ ಶೀಟ್ ಮೇಲೆ ಇಟ್ಟರೆ ನಿನ್ನ ಬಟ್ಟೆಯಿಂದ ಬೆಡ್ ಅನ್ನೂ ನೆನೆಸುವೆಯಾ ಎಂದೆಲ್ಲ ಹೇಳಿ ಗದರುತ್ತಿದ್ದರು. ತಂದೆಯ ಮಾತನ್ನು ಕೇಳಿ ಕೇಳಿ ಬೆಳೆದು ನಿಂತ ಮಗನಿಗೆ ಕಿರಿ ಕಿರಿಯಾಗತೊಡಗಿತು. ಎಲ್ಲಾ ವಿಷಯದಲ್ಲೂ ತನಗೆ ಕಿರಿಕಿರಿ ಮಾಡುವ ತಂದೆಯಿಂದ ದೂರವಾಗಬೇಕೆಂದು ಚಿಂತಿಸಿದ. ಆದರೆ ಯಾವುದೇ ಕೆಲಸವಿಲ್ಲದೆ ತಾನು ತಂದೆಯಿಂದ ದೂರವಾದರೆ ಗತಿಯೇನು ಎಂದೂ ಯೋಚಿಸಿದ. ಎಷ್ಟು ಗದರಿದರೂ ತಂದೆ ಯಾವುದನ್ನೂ ನಿರಾಕರಿಸದೇ ಬೇಕಾದ್ದನ್ನು ತಂದು ಕೊಡುತ್ತಿದ್ದರು.   
ಅದೊಂದು ದಿನ ಇಂಟರ್ ವ್ಯೂ ಗೆ ಕರೆ ಬಂತು. ಒಳ್ಳೆಯ ಸ್ಯಾಲರಿ ಬರುವ ಕೆಲಸ ಅದು. ಕೆಲಸ ಸಿಕ್ಕಿದರೆ ಜೀವಿಸಲೇನು ಚಿಂತೆಯಿಲ್ಲ, ಆಗಲೇ ತೀರ್ಮಾನಿಸಿದ ಮಗ ಕೆಲಸಕ್ಕೆ ಸೇರಿ ಒಳ್ಳೆಯ ಸಂಪತ್ತು ಗಳಿಸಿ ಶತ್ರುವಾದ ತಂದೆಯಿಂದ ದೂರವಾಗಬೇಕು, ಇನ್ನು ಮುಂದೆ ತಂದೆ ತನ್ನ ತಂಟೆಗೆ ಬರಬಾರದು, ಇಂಟರ್ ವ್ಯೂ ಗೆ ಹೋಗುವಾಗಲೂ ನಿನ್ನ ಮಕ್ಕಳಾಟ ಬಿಟ್ಟು ಸಂದರ್ಶನದಲ್ಲಿ ಸರಿಯಾಗಿ ಉತ್ತರಿಸು ಎಂದು ತಂದೆ ಹೇಳಿದರೂ ಅವರ ಮಾತಿಗೆ ಬೆಲೆ ಕೊಡದೆ, ಅವರಿಂದ ದೂರವಾಗಿ ಯಾವ ಕಿರಿಕಿರಿಯೂ ಇಲ್ಲದೆ ಜೀವಿಸ ಬಹುದೆಂದು ನೆನೆದು ಮುಂದೆ ನಡೆದ.
ಇಂಟರ್ ವ್ಯೂ ಹಾಲ್ ಗೆ ಹೋಗುವಾಗ ಗೇಟ್ ತೆರೆದಿತ್ತು. ಗೇಟ್ ಹಾಕಿ ಹೋಗೆಂದು ಹೇಳುವ ತಂದೆಯ ಮಾತು ನೆನಪಾಗಿ ಗೇಟ್ ಹಾಕಿ ಒಳ ನಡೆದ. ಹಾಲ್ ನಲ್ಲಿ ಎಲ್ಲಾ ಕಡೆಯೂ ಫ್ಯಾನ್ ತಿರುಗುತಿತ್ತು, ಅಲ್ಲೂ ತಂದೆಯ ಮಾತು ನೆನಪಾಗಿ ಅಗತ್ಯವಿಲ್ಲದೆ ತಿರುಗುವ ಫ್ಯಾನ್ ಆಫ್ ಮಾಡಿದ. ಸಿಂಕ್ ನ ನಲ್ಲಿಯಿಂದ
ನೀರಿನ ಹನಿಗಳು ವ್ಯರ್ಥವಾಗಿ ಹರಿದು ಹೋಗುತ್ತಿತ್ತು. ಅದನ್ನೂ ನಿಲ್ಲಿಸಿದ. ಅರ್ಧ ಗಂಟೆಯ ಬಳಿಕ ಮೆನೇಜರ್ ಬಂದು ಹೇಳಿದರು"ನಾಳೆಯಿಂದ ನೀವು ಕೆಲಸಕ್ಕೆ ಬನ್ನಿ, ನಾವು ನಿಮ್ಮನ್ನು ಆಯ್ಕೆ ಮಾಡಿದ್ದೇವೆ.
ಇಂಟರ್ ವ್ಯೂ ನಡೆಯದೇ ಹೇಗೆ ಆಯ್ಕೆ ಮಾಡಿದಿರಿ?
ನೀವು ಗೇಟ್ ಹಾಕಿದ್ದನ್ನೂ, ಫ್ಯಾನ್ ಆಫ್ ಮಾಡಿದ್ದನ್ನೂ ಹಾಗೂ ನೀರು ನಿಲ್ಲಿಸಿದ್ದನ್ನೂ ನಾವು ಸಿಸಿ ಟಿವಿಯಲ್ಲಿ ನೋಡಿದ್ದೇವೆ ನೀವಲ್ಲದೆ ಬೇರೆ ಯಾರೂ ಅದನ್ನು ಚಿಂತಿಸಲಿಲ್ಲ, ನಿಮ್ಮಂತವರು ನಮಗೆ ಬೇಕು. ಆ ಒಂದು ಕ್ಷಣ ಮಗ ತನ್ನ ತಂದೆಯನ್ನು ನೆನೆದು ಕಣ್ಣೀರಾದ.
ಮನೆಗೆ ಬಂದಾಗ ತಂದೆಯನ್ನು ಬಿಗಿಯಾಗಿ ಅಪ್ಪಿ ಬಿಕ್ಕಿ ಬಿಕ್ಕಿ ಅಳುತ್ತಾ ಹೇಳಿದ...
ಕ್ಷಮಿಸಿ ಅಪ್ಪಾ ನೀವು ಗದರಿಸಿ ಕಲಿಸಿದ್ದು ನನಗೆ ಈ ಕೆಲಸ ಸಿಗಲು ಕಾರಣವಾಯಿತು. ನೀವು ನನಗೆ ಸ್ಫೂರ್ತಿ. ನಿಮ್ಮಿಂದ ನಾನು ಎಂದಿಗೂ ದೂರವಾಗಲಾರೆ.

*ನೀತಿ: ಮಾತಾ - ಪಿತೃಗಳ ಮಾತು ಅಮೂಲ್ಯ*

Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...