Skip to main content

ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಇದರ ವಾರ್ಷಿಕ ಮಹಾಸಭೆ ಹಾಗು 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ




ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಇದರ ವಾರ್ಷಿಕ ಮಹಾಸಭೆ ಹಾಗು 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅಳೇಕಲದ ನಜಾತುಸ್ಸಿಬಿಯಾನ್ ಮದ್ರಸ ಹಾಲಿನಲ್ಲಿ ನಡೆಯಿತು.

ಉಳ್ಳಾಲ ರೇಂಜ್ ಅಧ್ಯಕ್ಷರಾದ ಯೂನುಸ್ ಇಮ್ದಾದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಅಳೇಕಲ ಜುಮಾ ಮಸೀದಿ ಖತೀಬರಾದ ಅಬೂಝಿಯಾದ್ ಮದನಿ ಪಟ್ಟಾಂಬಿ ಉಸ್ತಾದ್ ದುವಾ ನೆರವೇರಿಸಿದರು. ಸುಂದರಿಬಾಗ್ ಜುಮಾ ಮಸೀದಿ ಖತೀಬರಾದ ಶರೀಫ್ ಸಅದಿ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಇದರ ಗೌರವಾಧ್ಯಕ್ಷರಾದ ಯು ಎಸ್ ಹಂಝ ಹಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಪವಿತ್ರ ಹಜ್ ಯಾತ್ರೆ ಹೊರಟ ಶರೀಫ್ ಸಅದಿ ಉಸ್ತಾದರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಬಳಿಕ ಸಯ್ಯಿದ್ ಮದನಿ ಸುನ್ನೀ ಜಂ ಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ 2019 - 20 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ನೂತನಾಧ್ಯಕ್ಷರಾಗಿ ಯೂನುಸ್ ಇಮ್ದಾದಿ ತೋಟ, ಪ್ರಧಾನ ಕಾರ್ಯದರ್ಶಿಯಾಗಿ ಅಯ್ಯೂಬ್ ಮಹ್ಲರಿ ಮದನಿ ನಗರ, ಕೋಶಾಧಿಕಾರಿಯಾಗಿ ಅಝೀಝ್ ಸಅದಿ ಅಗ್ರಹಾರ, ಪರೀಕ್ಷಾ ವಿಭಾಗದ ಚೇರಮಾನಾಗಿ ಉಸ್ಮಾನ್ ಸಖಾಫಿ ಕಣ್ಣೂರು, ಕನ್ವೀನರಾಗಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಕ್ಷೇಮನಿಧಿ ವಿಭಾಗದ ಚೇರಮಾನಾಗಿ ಜಲಾಲುದ್ದೀನ್ ಮದನಿ ಉಳ್ಳಾಲ, ಕನ್ವೀನರಾಗಿ ಯೂಸುಫ್ ಮುಸ್ಲಿಯಾರ್ ಸಜಿಪ, ಮ್ಯಾಗಜಿನ್ ವಿಭಾಗದ ಚೇಯರ್ಮಾನ್  ಆಗಿ ಅಬ್ಬಾಸ್ ಮದನಿ, ಕನ್ವೀನರಾಗಿ ಹಮೀದ್ ಮದನಿ ಕೈಕೋ, ಮಿಶನರಿ ವಿಭಾಗದ ಚೇರಮಾನಾಗಿ ಮುನೀರ್ ಲತೀಫಿ, ಕನ್ವೀನರಾಗಿ ಅಶ್ರಫ್ ಸಅದಿ, ಟ್ರೈನಿಂಗ್ ವಿಭಾಗದ ಚೇರಮಾನಾಗಿ ಇಸ್ಮಾಯಿಲ್ ಸಖಾಫಿ, ಕನ್ವೀನರಾಗಿ ಮುಹ್ಯಿದ್ದೀನ್ ಮದನಿ ಕಟ್ಟತ್ತಿಲ ಇವರುಗಳನ್ನು ಆಯ್ಕೆ ಮಾಡಲಾಯಿತು ಹಾಗು 8 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಆಯ್ಕೆ ಮಾಡಲಾಯಿತು.

ರೇಂಜ್ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಮಹ್ಲರಿ ಸ್ವಾಗತಿಸಿ, ರೇಂಜ್ ಕಾರ್ಯದರ್ಶಿ ನವಾಝ್ ಸಖಾಫಿ ಧನ್ಯವಾದವಿತ್ತರು.





















Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...