Skip to main content

ದಾನದ ಫಲ

ದಾನದ ಫಲ

ಒಮ್ಮೆ ಮಹಿಳೆಯೊಬ್ಬರು ಬೇಡಿಕೊಂಡು ಬಂದವನೊಬ್ಬನಿಗೆ ತನ್ನ ಬಾಯಿಯಲ್ಲಿರುವ ತುತ್ತನ್ನೇ  ತೆಗೆದು ನೀಡಿದರು. ಕೆಲಕಾಲದ ಬಳಿಕ ಆ ಮಹಿಳೆಗೆ ಮಗುವೊಂದು ಜನಿಸಿತು. ಮಗು ಬೆಳೆದು ದೊಡ್ಡವನಾಗುತ್ತಿದ್ದಂತೆಯೇ  ತೋಳವೊಂದು ಮಗುವನ್ನು ಬೆನ್ನಟ್ಟಿಕೊಂಡು ಬಂದು ಕಚ್ಚಿಕೊಂಡು ಹೋಯಿತು. ಈ ಮಹಿಳೆ ಮಗನ ರಕ್ಷಣೆಗಾಗಿ ತೋಳದ ಹಿಂದೆಯೇ  ಓಡತೊಡಗಿದರು. ತಕ್ಷಣ ಅಲ್ಲಾಹನು ಮಲಕ್ ಗಳಲ್ಲೊಬ್ಬರನ್ನು ನೇಮಿಸಿ ತೋಳದ ಬಾಯಿಯಲ್ಲಿದ್ದ ಮಗುವನ್ನು ರಕ್ಷಿಸಿದ. ನಂತರ ಆ ಮಹಿಳೆಯೊಂದಿಗೆ ಈ ರೀತಿ ಹೇಳುವಂತೆಯೂ ಸೂಚಿಸಿದ. "ನಿಮ್ಮ ಮೇಲೆ ಅಲ್ಲಾಹನ ರಕ್ಷೆಯಿದೆ. ಅವತ್ತು ನೀಡಿದ ತುತ್ತಿನ ಬದಲಾಗಿ ಈ ತುತ್ತನ್ನು ನಿಮಗೆ ನೀಡಿದ್ದೇನೆ".(ಅಂದು ಈ ಮಹಿಳೆ ತನ್ನ ಬಾಯಿಯಲ್ಲಿದ್ದ ತುತ್ತನ್ನೇ ಬಡವನೊಬ್ಬನಿಗೆ ನೀಡಿದ ಕಾರಣದಿಂದ ಈಗ ತೋಳದ ಬಾಯಿಗೆ ತುತ್ತಾದ  ಮಗುವನ್ನು ಮರಳಿಸಿದ್ದೇನೆ).(ಇರ್ಶಾದುಲ್ ಇಬಾದ್)

ನಾವು ಮಾಡುವ ಯಾವ ಸತ್ಕರ್ಮ, ಯಾವ ರೀತಿ  ನಮ್ಮ ಆಪತ್ಕಾಲದಲ್ಲಿ ನೆರವಾಗುತ್ತದೆಯೆಂಬುದಕ್ಕೆ ಉದಾಹರಣೆಯಾಗಿದೆ ಈ ಘಟನೆ.

*ಜುನೈದ್ ಸಖಾಫಿ ಜೀರ್ಮುಕ್ಕಿ*
16/09/2019, ಸೋಮವಾರ

Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...