Skip to main content

ಎಪಿ ಉಸ್ತಾದ್

ಕೋಟ್ಯಾಂತರ ಅನುಯಾಯಿಗಳು, ವಿವಿಧ ಉನ್ನತ ಸರ್ಕಾರಿ ಹುದ್ದೆಗಳಲ್ಲಿರುವ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಉನ್ನತ ಸ್ಥಾನದಲ್ಲಿರುವ ಲಕ್ಷಾಂತರ ಶಿಷ್ಯಂದಿರನ್ನು ಸಂಪಾದಿಸಿರುವ ಎಪಿ ಉಸ್ತಾದರು *"ತನ್ನನ್ನು ನಿರಂತರವಾಗಿ ಸಾಮಾಜಿಕ ತಾಣಗಳಲ್ಲಿ ಮತ್ತು ವೇದಿಕೆಗಳಲ್ಲಿ ನಿಂತುಕೊಂಡು ತೆಜೋವದೆ ನಡೆಸಿ ವೈಯಕ್ತಿಕ ನಿಂದನೆ ನಡೆಸುವ ಪ್ರತಿಯೊಬ್ಬರ ಮೇಲೂ ಕೇಸು ಕೊಟ್ಟು ಬಿಡಿ"* ಎಂಬ ಒಂದೇ ಒಂದು ಹೇಳಿಕೆ ಕೊಟ್ಟು ತನ್ನನ್ನು ನಿಂದಿಸುವ ಮುನ್ನ ಪ್ರತಿಯೊಬ್ಬರೂ ಒಂದು ನಿಮಿಷ ಯೋಚಿಸುವಂತೆ ಮಾಡಿಸುವುದು ಎಪಿ ಉಸ್ತಾದರಿಗೆ ದೊಡ್ಡ ಕೆಲಸವೇನು ಆಗಿರಲಿಲ್ಲ. ಆದರೆ ಎಲ್ಲಾ ಆರೋಪಗಳಿಗು ಎಪಿ‌ ಉಸ್ತಾರ ಬಳಿ ಇದ್ದ ಪ್ರತಿಕ್ರಿಯೆ ಎಂದರೆ ಖಮರಿನಂತೆ ಹೊಳೆಯುವ ಮುಖದಲ್ಲಿನ ಒಂದು ಮುಗುಳು ನಗು ಮಾತ್ರವಾಗಿತ್ತು. ಆ ಒಂದು ಮುಗುಳು ನಗುವಿನಿಂದ ಎಪಿ ಉಸ್ತಾದರಿಗೆ ಏನು ಲಾಭವಾಗಿದೆ ಎಂದು ಗೊತ್ತಿಲ್ಲ, ಆದರೆ ಸಮುದಾಯದ ಸಾವಿರಾರು ಯುವಕರು ಕೇಸು ಕೋರ್ಟು ಅಂತ ಅಲೆದಾಡುವುದನ್ನು ಆ ಮುಗುಳು ನಗು ತಪ್ಪಿಸಿದೆ.

*ಅಲ್ಲಾಹು ಈ ಮಹಾನರಿಗೆ ಆರೋಗ್ಯಪೂರ್ಣ ದೀರ್ಘಾಯುಷ್ಯ ನೀಡಿ ನಮ್ಮ ಮರಣದವರೆಗೂ ಈ ನಾಯಕತ್ವ ಲಭಿಸುವ ಭಾಗ್ಯವನ್ನು ಅಲ್ಲಾಹು ಕರುಣಿಸಲಿ.*

✒ *ಎಸ್ಸಾರ್ಜೆ ಮಾಡನ್ನೂರ್*

Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...