ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ. ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...
Comments